Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:1 - ಕನ್ನಡ ಸತ್ಯವೇದವು J.V. (BSI)

1 ನಾವು ಪ್ರಯಾಸದಿಂದ ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೆಟ್ಟಗೆ ಹೋಗಿ ಕೋಸ್ ದ್ವೀಪಕ್ಕೆ ಸೇರಿದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್‍ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಅವರನ್ನು ಬಿಟ್ಟು ಅಗಲಿದ ಮೇಲೆ ನೇರವಾಗಿ ನೌಕಾಯಾನ ಮಾಡಿ ಕೋಸ್‍ದ್ವೀಪಕ್ಕೆ ಬಂದೆವು. ಮರುದಿನ ನಾವು ರೋದ ಎಂಬ ಸ್ಥಳವನ್ನು ತಲುಪಿ ಅಲ್ಲಿಂದ ಪತಾರಕ್ಕೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವೆಲ್ಲರೂ ಹಿರಿಯರನ್ನು ಬೀಳ್ಕೊಟ್ಟ ಬಳಿಕ ನೌಕಾಯಾನ ಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ದ್ವೀಪಕ್ಕೆ ಹೋದೆವು ಮತ್ತು ಅಲ್ಲಿಂದ ಪತಾರಕ್ಕೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಅವರನ್ನು ಅಗಲಿದ ನಂತರ, ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ಎಂಬಲ್ಲಿಗೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮಿ ಸಗ್ಳೆ ಜಾಂನ್ತ್ಯಾಕ್ನಿ ಧಾಡುನ್ ದಿವ್ನ್ ಢೊನಾತ್ನಾ ಕೊಸ್ ಮನ್ತಲ್ಯಾ ದ್ವಿಪಾಕ್ ಗೆಲ್ಲ್ಯಾಂವ್, ದುಸ್ರ್ಯಾಂದಿಸಿ ರೊದಾಕ್ ಪಾವುನ್ ಅನಿ ಥೈತ್ನಾ ಪತಾರಾಕ್ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:1
8 ತಿಳಿವುಗಳ ಹೋಲಿಕೆ  

ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು.


ಮಾತಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ - ಆಳವಾದ ಸ್ಥಳಕ್ಕೆ ದೋಣಿಯನ್ನು ನಡಿಸಿ ಮೀನುಬೇಟೆಗಾಗಿ ನಿಮ್ಮ ಬಲೆಗಳನ್ನು ಹಾಕಿರಿ ಎಂದು ಹೇಳಿದನು.


ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ಒಂದಾನೊಂದು ದಿನದಲ್ಲಿ ಆತನು ತನ್ನ ಶಿಷ್ಯರ ಸಂಗಡ ಒಂದು ದೋಣಿಯನ್ನು ಹತ್ತಿ ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಅವರಿಗೆ ಹೇಳಲು ಅವರು ದೋಣಿಯನ್ನು ನೀರಿನೊಳಗೆ ನೂಕಿ ಹೊರಟರು.


ಅಲ್ಲಿಂದ ಹೊರಟು ಎದುರು ಗಾಳಿ ಬೀಸುತ್ತಿದ್ದದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು