Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:16 - ಕನ್ನಡ ಸತ್ಯವೇದವು J.V. (BSI)

16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೆಜರೇಯ ಪಟ್ಟಣದಿಂದ ಕೆಲವು ಶಿಷ್ಯರು ನಮ್ಮೊಡನೆ ಬಂದರು. ನಾವು ತಂಗಲಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ಅವರು ನಮ್ಮನ್ನು ಕರೆದುಕೊಂಡು ಹೋದರು. ಈ ಮ್ನಾಸೋನನು ಆದಿಶಿಷ್ಯರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸೆಜಾರಾಕ್ನಾ ಉಲ್ಲಿ ಶಿಸಾಲೊಕಾ ಅಮ್ಚ್ಯಾ ವಾಂಗ್ಡಾ ಯೆವ್ನ್ ಅಮಿ ಜಾವ್ನ್ ರ್‍ಹಾತಲ್ಯಾ ಘರಾಪತರ್ ಅಮ್ಕಾ ಪಾವಸ್ಲ್ಯಾನಿ, ತ್ಯಾ ಘರಾತ್ಲೊ ಮಾನುಸ್ ಅದ್ದಿಚ್ಯಾ ಶಿಸಾತ್ನಿ ಎಕ್ಲೊ ಹೊವ್ನ್ ಹೊತ್ತೊ ಸೈಪುಸಾತ್ಲೊ ಮಾನುಸ್ ಮನ್ತಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:16
15 ತಿಳಿವುಗಳ ಹೋಲಿಕೆ  

ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.


ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು.


ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.


ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.


ಅವರಿಗೆ - ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆಮೇಲೆ ಅವರು ಅವನನ್ನು - ಇನ್ನೂ ಕೆಲವು ದಿವಸ ಇರಬೇಕೆಂದು ಬೇಡಿಕೊಂಡರು.


ಮರುದಿನ ಅವನು ಕೈಸರೈಯಕ್ಕೆ ಸೇರಿದನು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಪ್ರಾಣವಿುತ್ರರನ್ನೂ ಕೂಡ ಕರಿಸಿ ಪೇತ್ರನನ್ನು ಎದುರುನೋಡುತ್ತಿದ್ದನು.


ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು