Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:20 - ಕನ್ನಡ ಸತ್ಯವೇದವು J.V. (BSI)

20 ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆನಿ ಹೆ ಆಯಿಕ್ಲ್ಯಾನಿ ದೆವಾಕ್ ಸ್ತುತಿ ಕರ್‍ಲ್ಯಾನಿ, ಅನಿ ತೆನಿ ಪಾವ್ಲುಕ್ ಭಾವಾ, ಹಜಾರ್ಘಟ್ಲಿ ಜುದೆವಾಂಚಿ ಲೊಕಾ ವಿಶ್ವಾಸಿ ಹೊವ್ನ್ ಬದಲಲ್ಲೆ ತಿಯಾ ಬಗುಕ್ ಲಾಗ್ಲೈಯ್, ಅನಿ ಖಾಯ್ದ್ಯಾಂಚೆ ಪುಸ್ತಕ್ ದೆವಸ್ಪಾನ್ ವಾಚುಲ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:20
28 ತಿಳಿವುಗಳ ಹೋಲಿಕೆ  

ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿ ಜ್ಞಾನಾನುಸಾರವಾದದ್ದಲ್ಲ.


ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ.


ಸುದ್ದಿಯನ್ನು ಮಾತ್ರ ಅವರು ಕೇಳಿ ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು