Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:37 - ಕನ್ನಡ ಸತ್ಯವೇದವು J.V. (BSI)

37 ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು. ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಸೈನಿಕಾನಿ ಪಾವ್ಲುಕ್ ಸೈನಿಕಾಂಚ್ಯಾ ಕೊಟೆತ್ ಘೆವ್ನ್ ಜಾತಾನಾ ಪಾವ್ಲುನ್ ಸೆನಾಧಿಪತಿಕ್ ಎಕ್ ಗೊಸ್ಟ್ ಸಾಂಗುಕ್ ಮಾಕಾ ಅವಕಾಸ್ ಹಾಯ್ ಕಾಯ್? ಮನುನ್ ಇಚಾರ್‍ಲ್ಯಾನ್ ತನ್ನಾ ಸೆನಾಧಿಪತಿನ್ ಹೊ ತುಕಾ ಗ್ರಿಕ್ ಬಾಶ್ಯಾ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:37
8 ತಿಳಿವುಗಳ ಹೋಲಿಕೆ  

ಇವನಾರು? ಏನು ಮಾಡಿದ್ದಾನೆ ಎಂದು ಕೇಳಲು ಕೆಲವರು ಹೀಗೆ ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿವಿುತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


ಪೌಲನು ಜನರೊಳಗೆ ಹೋಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.


ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.


ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು