Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:39 - ಕನ್ನಡ ಸತ್ಯವೇದವು J.V. (BSI)

39 ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆಕಾ ಪಾವ್ಲುನ್ ಮಿಯಾ ಜುದೆವಾಂಚೊ ಸಿಲಿಸಿ ದೆಶಾಚ್ಯಾ ತಾರ್ಸಿಸಾತ್ ಉಪಾಜಲ್ಲೊ, ಮಿಯಾ ತ್ಯಾ ಶಾರಾಚೊ ಪ್ರಮುಖ್ ಮಾನುಸ್, ದಯಾ ಕರುನ್ ಲೊಕಾಂಚ್ಯಾ ವಾಂಗ್ಡಾ ಬೊಲುಕ್ ಅವಕಾಸ್ ಕರುನ್ ದಿವಾ ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:39
13 ತಿಳಿವುಗಳ ಹೋಲಿಕೆ  

ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು -


ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.


ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?


ಅದಕ್ಕೆ ಪೌಲನು - ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡುಹೋದರೆ ಸರಿ ಎಂದು ಹೇಳಿದನು.


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು