ಅಪೊಸ್ತಲರ ಕೃತ್ಯಗಳು 22:1 - ಕನ್ನಡ ಸತ್ಯವೇದವು J.V. (BSI)1 ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾವ್ಲುನ್, ಮಾಜ್ಯಾ ವಿಶ್ವಾಸಾತ್ ಹೊತ್ತ್ಯಾ ಜುದೆವ್ ವಾಂಗ್ಡಿಯಾನು ಅನಿ ಬಾಬಾನು ಮಾಜ್ಯೊ ಪ್ರತಿವಾದ್ ಆಯ್ಕಾ! ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.