Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:16 - ಕನ್ನಡ ಸತ್ಯವೇದವು J.V. (BSI)

16 ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅತ್ತಾ ತಿಯಾ ತಡೊ ಕರ್‍ತಲೆ ಕಶ್ಯಾಕ್? ಉಟ್ ! ಜೆಜುಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಬಾಲ್ತಿಮ್ ಕರುನ್ ಘೆ, ಅನಿ ತೆಜ್ಯಾಕ್ಡೆ ಮಾಗ್ನಿ ಕರ್, ತುಜೊ ಪಾಪ್ ದುವ್ನ್ ಘೆ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:16
19 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.


ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಕೂಡಲೆ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ ನನ್ನನ್ನು ಶುದ್ಧಗೊಳಿಸು.


ಪೇತ್ರನು - ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಎಂದು ಹೇಳಿದ್ದಕ್ಕೆ ಯೇಸು - ನಾನು ನಿನ್ನನ್ನು ತೊಳೆಯದಿದ್ದರೆ ನನ್ನ ಸಂಗಡ ನಿನಗೆ ಪಾಲಿಲ್ಲ ಅಂದನು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು