ಅಪೊಸ್ತಲರ ಕೃತ್ಯಗಳು 22:3 - ಕನ್ನಡ ಸತ್ಯವೇದವು J.V. (BSI)3 ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |