Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:10 - ಕನ್ನಡ ಸತ್ಯವೇದವು J.V. (BSI)

10 ಜಗಳವು ಬಹಳವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ - ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಆಜ್ಞೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ಬೊಲ್ನೆ ಮಾನಾ ಝಗ್ಡೊ ಹೊಲೆ, ಜುದೆವಾಂಚಿ ಲೊಕಾ ಪಾವ್ಲುಕ್ ತೊಡುನ್ ತುಕ್ಡೆ ಕಾಡುನ್ ಟಾಕಿತ್ ಮನ್ತಲ್ಯಾ ಭಿಂಯ್ಯಾನಿ ಸೈನಿಕಾಂಚ್ಯಾ ಅದಿಕಾರ್‍ಯಾನ್ ಸೈನಿಕಾಕ್ನಿ “ಖಾಲ್ತಿ ಉತ್ರುನ್ ಜಾವ್ನ್ ಪಾವ್ಲುಕ್ ಹೆಂಚ್ಯಾ ಜಗ್ಗೊಳ್ನಾ ನ್ಹೆವ್ನ್ ಸೈನಿಕಾಂಚ್ಯಾ ಕೊಟೆತ್ ಥವಾ” ಮನುನ್ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:10
16 ತಿಳಿವುಗಳ ಹೋಲಿಕೆ  

ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.


ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ ತಾವು ಕೋಟೆಗೆ ಹಿಂತಿರುಗಿ ಬಂದರು.


ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.


ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ, ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ; ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.


ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?


ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು