Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:18 - ಕನ್ನಡ ಸತ್ಯವೇದವು J.V. (BSI)

18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ - ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಸೆ ಹೊವ್ನ್, ಅಧಿಕಾರಿನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ನ್ಹೆಲ್ಯಾನ್. ಅನಿ ಹ್ಯಾ ದಾಂಡ್ಗ್ಯಾ ಮಾನ್ಸಾಕ್ ತುಜ್ಯಾಕ್ಡೆ ಬಲ್ವುನ್ ನ್ಹೆ ಮನುನ್ ಬಂಧಿಖಾನ್ಯಾತ್ ಹೊತ್ತ್ಯಾ ಪಾವ್ಲುನ್ ತುಕಾ ಎಕ್ ಖಬರ್ ಧಾಡುನ್ ದಿಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:18
11 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಅದಕ್ಕೆ ಯೇಸು - ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು - ಬೋಧಕನೇ, ಹೇಳು ಅಂದನು.


ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು.


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ - ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು