Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:29 - ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ಮಾಕಾ ಥೈ ಕಳುನ್ ಯೆಲ್ಲೆ ಕಾಯ್ ಮಟ್ಲ್ಯಾರ್ ಪಾವ್ಲುನ್ ಬುರ್ಶಿ ಕಾಮಾ ಕರ್‍ಲಾ ಮನುನ್ ತೆನಿ ಸಾಂಗ್ಲ್ಯಾರ್ಬಿ ತೆನಿ ಸಾಂಗುಲಾಗಲೆ ತೆಂಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಮಂದ್ ಪಡಲೆ ಹೊತ್ತೆ, ಅನಿ ಹೆಕಾ ಮರ್ನಾಚ್ಯಾ ಶಿಕ್ಷಾಕ್ ಹೊಂವ್ದಿ, ಬಂಧಿಖಾನ್ಯಾಕ್ ಧಾಡ್ತಲ್ಯಾ ಸಾರ್ಕೆ ಹೊಂವ್ದಿ ಕಾಯ್ಬಿ ಚುಕ್ ನತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:29
12 ತಿಳಿವುಗಳ ಹೋಲಿಕೆ  

ಈ ಮನುಷ್ಯನು ಮರಣದಂಡನೆಗಾಗಲಿ ಬೇಡಿಗಾಗಲಿ ಆಧಾರವಾದದ್ದೇನೂ ಮಾಡುವವನಲ್ಲ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.


ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ


ಅವರು ನನ್ನನ್ನು ವಿಚಾರಣೆಮಾಡಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು


ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು;


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು