ಅಪೊಸ್ತಲರ ಕೃತ್ಯಗಳು 23:30 - ಕನ್ನಡ ಸತ್ಯವೇದವು J.V. (BSI)30 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಖರೆ ಜುದೆವಾಂಚಿ ಥೊಡಿ ಲೊಕಾ ಪಾವ್ಲುಕ್ ಜಿವ್ ಕಾಡುಚೆ ಮನುನ್ ಯೆವ್ಜನ್ ಕರುಲಾಗಲೆ ಮಾಕಾ ಗೊತ್ತ್ ಹೊಲೆ, ತಸೆ ಹೊವ್ನ್, ಮಿಯಾ ತೆಕಾ ತುಜ್ಯಾ ಜಗ್ಗೊಳ್ ಧಾಡುನ್ ದಿಲಾ, ತೌವ್ಡೆಚ್ ನ್ಹಯ್ ತೆನಿ ಕರಲಿ ಚುಕಿಚಿ ಚಾಡಿಯಾ ತುಕಾ ಸಾಂಗುಕ್ ಸಾಂಗ್ತಲ್ಯಾ ಲೊಕಾಕ್ನಿ ಸಾಂಗ್ಲಾ. ಅಧ್ಯಾಯವನ್ನು ನೋಡಿ |