Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:34 - ಕನ್ನಡ ಸತ್ಯವೇದವು J.V. (BSI)

34 ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ರಾಜ್ಯ್ ಪಾಲಾನ್ ಚಿಟ್ ವಾಚ್ಲ್ಯಾನ್ ಅನಿ ತೆನಿ ಪಾವ್ಲುಕ್, “ತಿಯಾ ಖಲ್ಯಾ ದೆಶ್ಯಾಚೊ?” ಮನುನ್ ಇಚಾರ್ತಾನಾ, ಸಿಲಿಸಿಯಾಚೊ ಮನ್ತಲೆ ಕಳುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:34
9 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.


ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿವಸಗಳ ತರುವಾಯ ಕೈಸರೈಯದಿಂದ ಯೆರೂಸಲೇವಿುಗೆ ಹೋದನು.


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಇದನ್ನು ಪಿಲಾತನು ಕೇಳಿ - ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ


ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು