Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:1 - ಕನ್ನಡ ಸತ್ಯವೇದವು J.V. (BSI)

1 ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಚ್ ದಿಸಾ ಕಳದ್ದ್ಯಾ ಮಾನಾ ಮುಖ್ಯ್ ಯಾಜಕ್ ಅನನಿಯಾ, ಜುದೆವಾಂಚ್ಯಾ ಜಾನ್ತ್ಯಾ ಮುಖಂಡಾಕ್ನಿ ಉಲ್ಲ್ಯಾ ಲೊಕಾಕ್ನಿ ಅನಿ ತೆರ್ತುಲ್ ಮನ್ತಲ್ಯಾ ವಕಿಲಾಕ್ ಬಲ್ವುನ್ ಘೆವ್ನ್ ರಾಜ್ಯ್ ಪಾಲಾಕ್ಡೆ ಪಾವ್ಲುಚೆರ್ ಚುಕ್ ಸಾಂಗುಚೆ ಮನುನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:1
15 ತಿಳಿವುಗಳ ಹೋಲಿಕೆ  

ನಾನು ದೇವಾರಾಧನೆಮಾಡುವದಕ್ಕೆ ಯೆರೂಸಲೇವಿುಗೆ ಹೋಗಿ ಹನ್ನೆರಡು ದಿವಸ ಮಾತ್ರವಾಯಿತೆಂದು ನೀನು ತಿಳಿದುಕೊಳ್ಳಬಹುದು.


ಅದಕ್ಕೆ ಮಹಾಯಾಜಕನಾದ ಅನನೀಯನು - ಅವನ ಬಾಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆಕೊಡಲು


ಅಲ್ಲಿ ಮಹಾಯಾಜಕನೂ ಯೆಹೂದ್ಯರಲ್ಲಿ ಪ್ರಮುಖರೂ ಅವನಿಗೆ ಪೌಲನ ಮೇಲಣ ಫಿರಿಯಾದಿಯನ್ನು ಹೇಳಿ -


ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ.


ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.


ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -


ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ;


ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಸಹೋದರರೇ, ನಾನಂತೂ ದೇವರು ಹೇಳಿಕೊಟ್ಟ ಮಾತನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ ಜ್ಞಾನಾಡಂಬರದಿಂದಾಗಲಿ ಬರಲಿಲ್ಲ.


ನಾನು ಯೆರೂಸಲೇವಿುನಲ್ಲಿದ್ದಾಗ ಯೆಹೂದ್ಯರ ಮಹಾಯಾಜಕರೂ ಸಭೇಹಿರಿಯರೂ ಅವನ ವಿಷಯವಾಗಿ ನನಗೆ ಫಿರ್ಯಾದಿ ಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ರಾಜಾಸನದ ಮೇಲೆ ಕೂತು ಅವರಿಗೆ ಉಪನ್ಯಾಸ ಮಾಡಿದನು.


ಘನವಂತ, ಮಂತ್ರಾಲೋಚಕ, ತಾಂತ್ರಿಕ, ಮಾಂತ್ರಿಕ, ಇವರೆಲ್ಲರನ್ನೂ ತೊಲಗಿಸಿಬಿಡುವೆನು.


ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ಪೌಲನನ್ನು ಕರೆಯಿಸಿದ ನಂತರ ತೆರ್ತುಲ್ಲನು ಅವನ ಮೇಲೆ ತಪ್ಪುಹೊರಿಸುವದಕ್ಕೆ ಪ್ರಾರಂಭಿಸಿ ಹೀಗಂದನು - ಶ್ರೀಮತ್ ಮಹಾ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ ಎಲ್ಲಾ ಸ್ಥಳದಲ್ಲಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು