Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:10 - ಕನ್ನಡ ಸತ್ಯವೇದವು J.V. (BSI)

10 ದೇಶಾಧಿಪತಿಯು ಪೌಲನಿಗೆ - ನೀನು ಮಾತಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವನ್ನು ಹೇಳಿದ್ದೇನಂದರೆ - ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ರಾಜ್ಯ್ ಪಾಲಾನ್ ಪಾವ್ಲುಕ್ ಸೊನ್ನಾಯ್ ಕರುನ್ ಬೊಲುಕ್ ಲಾವ್ಲ್ಯಾನ್, ತನ್ನಾ ಪಾವ್ಲುನ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್: ರಾಜ್ಯ್ ಪಾಲ್ ಫೆಲಿಕ್ಸಾ, ತಿಯಾ ಲೈ ವರ್ಸಾಂಚ್ಯಾಕ್ನಾ ಹ್ಯಾ ದೆಶ್ಯಾಕ್ ಝಡ್ತಿ ಕರ್‍ತಲೊ ಹೊವ್ನ್ ಹಾಸ್ ಮನ್ತಲೆ ಮಾಕಾ ಗೊತ್ತ್ ಹಾಯ್, ತಸೆ ಹೊವ್ನ್, ಮಿಯಾ ಮಾಜ್ಯಾ ಬಚಾವಾ ಸಾಟ್ನಿ ತುಜ್ಯಾ ಇದ್ರಾಕ್ ವಾದ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:10
12 ತಿಳಿವುಗಳ ಹೋಲಿಕೆ  

ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ಆಗ ಅಗ್ರಿಪ್ಪನು ಪೌಲನಿಗೆ - ನೀನು ನಿನ್ನ ಪಕ್ಷದಲ್ಲಿ ಮಾತಾಡಬಹುದು ಅನ್ನಲು ಪೌಲನು ಕೈಯೆತ್ತಿ ಪ್ರತಿವಾದ ಮಾಡಿದ್ದೇನಂದರೆ -


ಮತ್ತು ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.


ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ


ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ -


ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.


ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು