Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:11 - ಕನ್ನಡ ಸತ್ಯವೇದವು J.V. (BSI)

11 ನಾನು ದೇವಾರಾಧನೆಮಾಡುವದಕ್ಕೆ ಯೆರೂಸಲೇವಿುಗೆ ಹೋಗಿ ಹನ್ನೆರಡು ದಿವಸ ಮಾತ್ರವಾಯಿತೆಂದು ನೀನು ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಆರಾಧನೆಗೋಸ್ಕರ ಜೆರುಸಲೇಮಿಗೆ ಹೋದದ್ದು ಕೇವಲ ಹನ್ನೆರಡು ದಿನಗಳ ಹಿಂದೆಯಷ್ಟೆ. ಅದು ಸತ್ಯವೆಂದು ಸ್ವತಃ ನೀನೇ ತಿಳಿದುಕೊಳ್ಳಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಆರಾದನ್ ಕರುಕ್ ಸಾಟ್ನಿ ಜೆರುಸಜಲೆಮಾಕ್ ಗೆಲ್ಲೆ ಬಾರಾದಿಸಾ ತವ್ಡೆಚ್ ಮನ್ತಲೆ ತುಕಾಚ್ ಗೊತ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:11
8 ತಿಳಿವುಗಳ ಹೋಲಿಕೆ  

ಐದು ದಿವಸಗಳಾದ ಮೇಲೆ ಮಹಾಯಾಜಕನಾದ ಅನನೀಯನು ಸಭೇಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಲನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು ಪೌಲನ ಮೇಲೆ ದೇಶಾಧಿಪತಿಗೆ ಫಿರಿಯಾದಿ ಹೇಳಿದನು.


ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು.


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಆಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ - ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ ಎಪ್ಪತ್ತು ಮಂದಿ ಸವಾರರನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿರಿ;


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ಪೌಲನ ಮೇಲೆ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಕೂಡಿಬರುವದಕ್ಕೆ ಅಪ್ಪಣೆಕೊಟ್ಟು ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು