Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:23 - ಕನ್ನಡ ಸತ್ಯವೇದವು J.V. (BSI)

23 ಆಗ ಅವನು ಶತಾಧಿಪತಿಗೆ - ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪಾವ್ಲುಕ್ ರಾಕುಕ್ ಥವ್ಚೆ ಮನುನ್ ತೆನಿ ಸಾಂಗ್ಲ್ಯಾನ್, ಖರೆ ಪಾವ್ಲುಚ್ಯಾ ವಾಂಗ್ಡಿಯಾಕ್ನಿ ತೆಕಾ ಪಾಜೆ ಹೊಲ್ಲಿ ವಸ್ತಾ ಹಾನುನ್ ದಿವ್ಕ್ ಅವ್ಕಾಸ್ ದಿವ್ಚೆ ಮನುನ್ ತೆನಿ ಅದಿಕಾರಾನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:23
10 ತಿಳಿವುಗಳ ಹೋಲಿಕೆ  

ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು.


ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು.


ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.


ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -


ಫೆಸ್ತನು ಅವರಿಗೆ - ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟುಹೋಗಬೇಕೆಂದಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು