Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:26 - ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಪಾವ್ಲುಕ್ನಾ ಅಪ್ನಾಕ್ ಪೈಸೆ ಗಾವ್ತಾ ಕಾಯ್ಕಿ ಮನುನ್ ತೆನಿ ಬರೊಸೊ ಕರುನ್ ಲೈಂದಾ ಪಾವ್ಲುಕ್ ಬಲ್ವುನ್ ತೆಚ್ಯಾ ವಾಂಗ್ಡಾ ಬೊಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:26
29 ತಿಳಿವುಗಳ ಹೋಲಿಕೆ  

ದುಷ್ಟನು ಲಂಚವನ್ನು ಮಡಲಿನಿಂದ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುವನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಸುರಾಪಾನಮುಗಿದ ಕೂಡಲೆ ಸೂಳೆತನದಲ್ಲಿ ಬೀಳುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು; ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು; ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೆ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟುಹಾಕುವದು.


ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.


ಇದಲ್ಲದೆ ಮೋಶೆಯೂ ಎಲೀಯನೂ ಆತನ ಸಂಗಡ ಮಾತಾಡುತ್ತಾ ಅವರಿಗೆ ಕಾಣಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು