Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:23 - ಕನ್ನಡ ಸತ್ಯವೇದವು J.V. (BSI)

23 ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದುಸ್ರ್ಯಾಂದಿಸಿ ಅಗ್ರಿಪ್ಪರಾಜಾ, ಅನಿ ಬೆರ್ನಿಕೆ ರಾನಿ ಆಡಂಬರಾಚೆ ಕಪ್ಡೆನೆಸುನ್ ಘೆವ್ನ್ ಸೈನಿಕಾಂಚ್ಯಾ ಅಧಿಕಾರ್ಯ್ಯಾಚ್ಯಾ ವಾಂಗ್ಡಾ ಅನಿ ಸೆಜರೆಯಾತ್ಲ್ಯಾ ಪ್ರಮುಖ್ ಲೊಕಾಂಚ್ಯಾ ವಾಂಗ್ಡಾ ಝಡ್ತಿ ಕರ್‍ತಲ್ಯಾ ಜಾಗ್ಯಾರ್ ಯೆಲೆ, ತನ್ನಾ ಪಾವ್ಲುಕ್ ಭುತ್ತುರ್ ಹಾನುಚೆ ಮನುನ್ ಫೆಸ್ತಾನ್ ಸೈನಿಕಾಕ್ನಿ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:23
18 ತಿಳಿವುಗಳ ಹೋಲಿಕೆ  

ಆಮೇಲೆ ರಾಜನೂ ದೇಶಾಧಿಪತಿಯೂ ಬೆರ್ನಿಕೆಯೂ ಅವರ ಸಂಗಡ ಕೂತಿದ್ದವರೂ ಎದ್ದು ಆಚೆಗೆ ಹೋಗಿ -


ಕೆಲವು ದಿವಸಗಳು ಗತಿಸಿದ ನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನ ದರ್ಶನಮಾಡಿಕೊಳ್ಳುವದಕ್ಕೆ ಕೈಸರೈಯಕ್ಕೆ ಬಂದರು.


ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ.


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.


ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ರಾಜಾಸನದ ಮೇಲೆ ಕೂತು ಅವರಿಗೆ ಉಪನ್ಯಾಸ ಮಾಡಿದನು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ನಾನು ನಿನ್ನ ಬಹುಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು; ಐಗುಪ್ತವು ಹೆಚ್ಚಳಪಡುವ ವಸ್ತುಗಳನ್ನು ಅವರು ಸೂರೆಮಾಡುವರು; ಅದರ ಜನ ಯಾವತ್ತೂ ನಿರ್ನಾಮವಾಗುವದು.


ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ಹೀಗಿರಲು ನಾನು ಅತಿದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವವು.


ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.


ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು