Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:3 - ಕನ್ನಡ ಸತ್ಯವೇದವು J.V. (BSI)

3 ನೀನು ದಯಮಾಡಿ ಅವನನ್ನು ಯೆರೂಸಲೇವಿುಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಜರುಜಲೆಮಾಕ್ ಜಾತಾನಾ ವಾಟೆರುಚ್ ತೆಕಾ ಜಿವ್ ಕಾಡುನ್ ಟಾಕುಚೆ ಮನುನ್ ರಾಕುನ್ಗೆತ್ ಹೊತ್ತ್ಯಾ ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:3
16 ತಿಳಿವುಗಳ ಹೋಲಿಕೆ  

ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ; ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು