Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:5 - ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನಿಮ್ಮಲ್ಲಿ ಪ್ರಮುಖರು ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅನುಚಿತವಾದದ್ದೇನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ನಾಯಕರಲ್ಲಿ ಕೆಲವರು ನನ್ನೊಂದಿಗೆ ಬರಲಿ. ಅವನು ನಿಜವಾಗಿಯೂ ಅಪರಾಧ ಮಾಡಿದ್ದರೆ ಅವನ ಮೇಲೆ ಸೆಜರೇಯದಲ್ಲೇ ಅವರು ದೋಷಾರೋಪಣೆ ಮಾಡಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಚ್ಯಾ ಮುಖಂಡಾತ್ನಿ ಥೊಡಿ ಲೊಕಾ ಮಾಜ್ಯಾ ವಾಂಗ್ಡಾ ಯೆಂವ್ದಿ, ತೆನಿ ಪಾವ್ಲುಚಿ ಚುಕ್ ಸಾಂಗ್ತಲೆ ಹೊಲ್ಯಾರ್ ಸೆಜರೆಯಾತ್ ಸಾಂಗುಂದಿತ್ ಮನುನ್ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:5
11 ತಿಳಿವುಗಳ ಹೋಲಿಕೆ  

ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.


ನಾನು ಅವರಿಗೆ - ಪ್ರತಿವಾದಿಯು ವಾದಿಗಳಿಗೆ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷವಿಷಯದಲ್ಲಿ ಪ್ರತಿವಾದಮಾಡುವದಕ್ಕೆ ಆಸ್ಪದಕೊಡದೆ ಅವನನ್ನು ಒಪ್ಪಿಸಿಬಿಡುವದು ರೋಮಾಯರ ಪದ್ಧತಿಯಲ್ಲವೆಂದು ಹೇಳಿದೆನು.


ಇವನನ್ನು ನೀನೇ ವಿಚಾರಿಸಿದರೆ ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ ಸುಳ್ಳೋ ಇವನಿಂದಲೇ ತಿಳಿದುಕೊಳ್ಳಬಹುದು ಎಂದು ಹೇಳಿದನು.


ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ಹುಟ್ಟಿತೆಂದು ನನಗೆ ತಿಳಿದುಬಂದದರಿಂದ ಕೂಡಲೆ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ಮಾತಾಡುವ ಹಾಗೆ ಅಪ್ಪಣೆ ಕೊಟ್ಟೆನು ಎಂಬದೇ.


ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ.


ಫೆಸ್ತನು ಅವರಿಗೆ - ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟುಹೋಗಬೇಕೆಂದಿದ್ದೇನೆ;


ಅವನು ಅವರಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿವಸಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕೂತುಕೊಂಡು ಪೌಲನನ್ನು ತರಬೇಕೆಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು