Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:18 - ಕನ್ನಡ ಸತ್ಯವೇದವು J.V. (BSI)

18 ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಿಯಾ ತೆಂಕಾ ಖರೆಪಾನ್ ಕಳ್ವುನ್ ಕಾಳ್ಕಾಕ್ನಾ ಉಜ್ಜೊಡಾತ್ ಯೆಯ್ ಸಾರ್ಕೆ ಅನಿ ಮ್ಹಾರ್ವಾಚ್ಯಾ ಅಧಿಕಾರಾಕ್ನಾ ಪರ್ತುನ್ ದೆವಾಕ್ಡೆ ಯೆಯ್ ಸಾರ್ಕೆ ಕರುಚೆ, ತನ್ನಾ ತೆಂಚೊ ಪಾಪ್ ಮಾಪಿ ಹೊತಾ, ಮಾಜ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಪವಿತ್ರ್ ಹೊಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ತೆನಿಬಿ ವಾಟೊ ಘೆತಾತ್, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:18
90 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಾಗಿದ್ದೀರಿ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;


ನೀವು ಕ್ರಿಸ್ತನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಾಗಬೇಡಿರಿ. ಧರ್ಮಕ್ಕೂ ಅಧರ್ಮಕ್ಕೂ ಜೊತೆಯೇನು?


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.


ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು, ಮೊಬ್ಬುಕತ್ತಲುಗಳಲ್ಲಿಯೂ ಕುರುಡರ ಕಣ್ಣು ಕಾಣುವದು.


ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.


ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.


ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಕಣ್ಣಿದ್ದರೂ ಕುರುಡಾದ ಕಿವಿಯಿದ್ದರೂ ಕಿವುಡಾದ ಜನವನ್ನು ಕರೆ.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು.


ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಒಂದು ಸಂಗತಿಯನ್ನು ಮಾತ್ರ ನಿವ್ಮಿುಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ಕೇಳಿ ನಂಬಿದ್ದರಿಂದಲೋ?


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು