Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:19 - ಕನ್ನಡ ಸತ್ಯವೇದವು J.V. (BSI)

19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಬೊಲುನ್ಗೆತ್ ರಾತಾನಾ ಅಶೆ ಸಾಂಗ್ಲ್ಯಾನ್, ಅಗ್ರಿಪ್ಪ್ ರಾಜಾ, ಮಾಕಾ ಸರ್‍ಗಾಚೆ ದರ್ಶನ್ ಗಾವ್ಲೆ, ತೆ ಬಗಲ್ಲ್ಯಾ ಮಾನಾ ತೆಕಾ ಅವ್ಮಾನ್ ಕರುಕ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:19
13 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ; ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ದೋಷಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.


ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಈಚೆಗೆ ಹಾಕಿ ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ ಅವರ ಕಣ್ಣಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು