Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:24 - ಕನ್ನಡ ಸತ್ಯವೇದವು J.V. (BSI)

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ - ಪೌಲನೇ, ನೀನು ಮರುಳಾಗಿದ್ದೀ; ನೀನು ಬಹಳವಾಗಿ ಮಾಡುವ ಶಾಸ್ತ್ರವಿಚಾರವು ನಿನ್ನನ್ನು ಮರುಳುಗೊಳಿಸುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಪ್ನಾಂಚ್ಯಾ ವೈನಾ ಹಿ ಸಂಗ್ತಿಯಾ ಪಾವ್ಲು ಸಾಂಗಿತ್ ರಾತಾನಾ ಫೆಸ್ತ್ ಮನ್ತಲೊ ಪಾವ್ಲು ತಿಯಾ ,ಪಿಸೊ ಹೊಲ್ಲೆಯ್! ತಿಯಾ ಶಿಕಲೆ ಲೈ ಹೊವ್ನ್ ತುಕಾ ಪಿಸೊ ಹೊಯ್ ಸಾರ್ಕೆ ಕರ್‍ಲಾ! ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:24
19 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;


ನಮಗೆ ಬುದ್ಧಿಪರವಶವಾಗಿದ್ದರೆ ಅದು ದೇವರ ಮಹಿಮೆಗಾಗಿಯೇ ಅದೆ; ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿ ಅದೆ.


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ಇದನ್ನು ಕೇಳಿ ಆತನ ಬಂಧುಗಳು ಅವನಿಗೆ ಹುಚ್ಚುಹಿಡಿದದೆ ಎಂದು ಹೇಳಿ ಆತನನ್ನು ಹಿಡಿಯುವದಕ್ಕೆ ಹೊರಟರು.


ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಯೇಹುವು ತಿರಿಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು - ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ ಎಂದು ಕೇಳಿದರು. ಅದಕ್ಕೆ ಅವನು - ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬದು ನಿಮಗೆ ಗೊತ್ತುಂಟಲ್ಲಾ ಎಂದು ಉತ್ತರಕೊಟ್ಟನು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.


ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.


ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು


ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು