Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:28 - ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಅಗ್ರಿಪ್ಪನು - ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ರಾಜ ಅಗ್ರಿಪ್ಪನು ಪೌಲನಿಗೆ, “ಬಹು ಸುಲಭವಾಗಿ ನನ್ನನ್ನು ಒಪ್ಪಿಸಿ ಕ್ರೈಸ್ತನನ್ನಾಗಿ ಮಾಡಬಹುದೆಂದು ನೀನು ಯೋಚಿಸಿಕೊಂಡಿರುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಪಾವ್ಲುಕ್ ಅಗ್ರಿಪ್ಪ್ ರಾಜಾನ್,ಲೈ ಸರಳ್ ಹೊವ್ನ್ ಮಾಕಾ ಮಾನುನ್ ಕ್ರಿಸ್ತಾಂವ್ ಕರುಚೆ ಮನುನ್ ತಿಯಾ ಯೆವ್ಜುಲೈ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:28
11 ತಿಳಿವುಗಳ ಹೋಲಿಕೆ  

ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ? ಉಂಟೆಂದು ಬಲ್ಲೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು