Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:3 - ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ತುಮ್ಚ್ಯಾ ವಾಂಗ್ಡಾ ಬೊಲುಕ್ ಲೈ ಕುಶಿ ಹೊತಾ, ಕಶ್ಯಾಕ್ ಮಟ್ಲ್ಯಾರ್, ಜುದೆವಾಂಚ್ಯಾ ಸಗ್ಳ್ಯಾ ಪದ್ದತಿಯಾ ಅನಿ ಜುದೆವಾಂಚಿ ಲೊಕಾ ವಾದ್ ಕರ್ತಲ್ಯಾಚ್ಯಾ ವಿಶಯಾತ್ ತುಕಾ ಬರೆ ಕರುನ್ ಗೊತ್ತ್ ಹಾಯ್, ತೆಚೆಸಾಟ್ನಿ ಮಾಜ್ಯಾ ಗೊಸ್ಟಿಯಾ ಸಗ್ಳಿ ತಾಳ್ಮೆನ್ ಆಯ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:3
13 ತಿಳಿವುಗಳ ಹೋಲಿಕೆ  

ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.


ಅಗ್ರಿಪ್ಪರಾಜನು ಈ ಸಂಗತಿಗಳನ್ನು ತಿಳಿದವನು; ಅವನ ಮುಂದೆ ಧೈರ್ಯವಾಗಿ ಮಾತಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮರೆಯಾದದ್ದಲ್ಲವೆಂದು ನಂಬಿದ್ದೇನೆ, ಯಾಕಂದರೆ ಇದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.


ಇವನ ವಿಷಯದಲ್ಲಿ ಮಹಾಸನ್ನಿಧಾನಕ್ಕೆ ಬರೆಯುವದಕ್ಕೆ ನಿಶ್ಚಯವಾದದ್ದೇನೂ ಇಲ್ಲ. ಸೆರೆಯವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವದು ಯುಕ್ತವಲ್ಲವೆಂದು ನನಗೆ ತೋರುತ್ತದೆ.


ದೇಶಾಧಿಪತಿಯು ಪೌಲನಿಗೆ - ನೀನು ಮಾತಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವನ್ನು ಹೇಳಿದ್ದೇನಂದರೆ - ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತೇನೆ.


ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ದಯೆಯಿಂದ ಲಾಲಿಸಬೇಕೆಂದು ಬೇಡಿಕೊಳ್ಳುತ್ತೇನೆ.


ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.


ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ದೋಷಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.


ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿಷರತ್ತುಗಳಿಂದೊಡಗೂಡಿ ಮುಚ್ಚಿದ್ದ ಪತ್ರವನ್ನೂ ಮುಚ್ಚಳದ ಪತ್ರವನ್ನೂ ತೆಗೆದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು