Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:31 - ಕನ್ನಡ ಸತ್ಯವೇದವು J.V. (BSI)

31 ಈ ಮನುಷ್ಯನು ಮರಣದಂಡನೆಗಾಗಲಿ ಬೇಡಿಗಾಗಲಿ ಆಧಾರವಾದದ್ದೇನೂ ಮಾಡುವವನಲ್ಲ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಥೈತ್ನಾ ತೆನಿ ಭಾಯ್ರ್ ಜಾವ್ನ್ ಸೊಡ್ಲೆ, ತೆನಿ ಸಗ್ಳ್ಯಾನಿ ಎಕಾಮೆಕಾಕ್ ಹ್ಯಾ ಮಾನಸ್ಸಾಕ್ ಜಿವಾನಿ ಮಾರುಚೆ ನಾಹೊಲ್ಲ್ಯಾರ್ ಬಂಧಿಖಾನ್ಯಾತ್‍ ಬಿ ಘಾಲುನೈಯ್, ಹೆನಿ ಬುರ್ಶೆ ಕಾಯ್ ಕರುಕ್ ನಾ! ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:31
10 ತಿಳಿವುಗಳ ಹೋಲಿಕೆ  

ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರವಿಷಯಗಳನ್ನು ಹಿಡಿದು ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.


ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು.


ಅವರು ನನ್ನನ್ನು ವಿಚಾರಣೆಮಾಡಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.


ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು.


ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು