Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:5 - ಕನ್ನಡ ಸತ್ಯವೇದವು J.V. (BSI)

5 ನಮ್ಮ ಧರ್ಮದಲ್ಲಿ ಬಹು ಖಂಡಿತವಾದ ಮತವನ್ನನುಸರಿಸಿ ಫರಿಸಾಯನಾಗಿ ನಡಕೊಂಡೆನೆಂದು ಪ್ರಾರಂಭದಿಂದಲೂ ಅವರು ಬಲ್ಲರು; ಸಾಕ್ಷಿಹೇಳುವದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಧರ್ಮದ ಅತಿ ಕಟ್ಟುನಿಟ್ಟಾದ ಪಂಥವೆಂದರೆ ಫರಿಸಾಯಪಂಥ. ಅದರ ಅನುಯಾಯಿ ಆಗಿದ್ದೆ ನಾನು. ಇದನ್ನು ಮೊದಲಿನಿಂದ ಅರಿತಿರುವ ಅವರೇ ಮನಸ್ಸುಮಾಡಿದರೆ ಸಾಕ್ಷಿಹೇಳಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಾಕ್ಷಿ ಸಾಂಗುಕ್ ತೆಂಕಾ ಮನ್ ರ್‍ಹಾಲ್ಯಾರ್ ಸಾಂಗುಕ್ ಅಡ್ಡಿನಾ, ಮಿಯಾ ಮಾಜೊ ಧರಮ್ ಸೊಡಿನಸ್ತಾನಾ ಪಾಳ್ತಲ್ಯಾ ಫಾರಿಜೆವಾಂಚ್ಯಾ ಪದ್ದತಿ ಸಾರ್ಕೆ ಚಲುಚೆ ಮನ್ತಲೆ ತೆಂಕಾ ಅದ್ದಿಚ್ಯಾನುಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:5
7 ತಿಳಿವುಗಳ ಹೋಲಿಕೆ  

ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು