Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:35 - ಕನ್ನಡ ಸತ್ಯವೇದವು J.V. (BSI)

35 ರೊಟ್ಟಿಯನ್ನು ತೆಗೆದುಕೊಂಡು ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗೆ ಹೇಳಿದ ಮೇಲೆ ಪೌಲನು ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಅದನ್ನು ಮುರಿದು ತಿನ್ನಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅಶೆ ಸಾಂಗುನ್ ಮಾನಾ ಪಾವ್ಲುನ್ ಭಾಕ್ರಿ ಘೆವ್ನ್ ತಿಕಾ ಸಗ್ಳ್ಯಾಂಚ್ಯಾ ಫಿಡ್ಯಾತ್ ದೆವಾಕ್ ಸ್ತುತಿ ಕರ್‍ಲ್ಯಾನ್, ಅನಿ ಭಾಕ್ರಿ ಮೊಡುನ್ ತುಕ್ಡೊ ಖಾವ್ಕ್ ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:35
16 ತಿಳಿವುಗಳ ಹೋಲಿಕೆ  

ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರ ಸ್ತೋತ್ರಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಡಲು ಶಿಷ್ಯರು ಗುಂಪಿನವರಿಗೆ ಹಂಚಿಕೊಟ್ಟರು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ದಿನವನ್ನು ಗಣ್ಯಮಾಡುವವನು ಕರ್ತನಿಗಾಗಿ ಅದನ್ನು ಗಣ್ಯಮಾಡುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವಸ್ತೋತ್ರ ಮಾಡುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವಸ್ತೋತ್ರ ಮಾಡುತ್ತಾನೆ.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು.


ಆತನು ಅವರ ಸಂಗಡ ಊಟಕ್ಕೆ ಕೂತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು.


ಆಗ ಆತನು ಜನರ ಗುಂಪಿಗೆ - ನೆಲದ ಮೇಲೆ ಕೂತುಕೊಳ್ಳಿರಿ ಎಂದು ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಹಂಚುವದಕ್ಕೆ ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.


ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿ ಹೋಗುವವರೆಗೆ ಜನರು ಊಟಮಾಡುವದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ; ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ; ಅವನು ಸಿಕ್ಕುವ ಸಮಯ ಇದೇ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು