Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:41 - ಕನ್ನಡ ಸತ್ಯವೇದವು J.V. (BSI)

41 ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆ ಮೊಟಿ ಢೊನ್ ರೆತಿಚ್ಯಾ ಗುಡ್ಯಾಕ್ ಆಡ್ಲುನ್ ಢೊನಾಚೊ ಫಿಡ್ಲೊ ಭಾಗ್ ರೆತಿತ್ ಸಿರ್ಕುನ್ ಪಡಲ್ಯಾಕ್ ಢೊನ್ ಚಾಲ್ವುಕ್ ಹೊವ್ಕ್ ನಾ, ಮಾನಾ ಮೊಟಿ ಲಾಟಾ ಯೆವ್ನ್ ಢೊನಾಚ್ಯಾ ಫಾಟ್ಲ್ಯಾ ಭಾಜುಕ್ ಮಾರುನ್ ತುಕ್ಡೆ ತುಕ್ಡೆ ಕರುನ್ ಟಾಕುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:41
11 ತಿಳಿವುಗಳ ಹೋಲಿಕೆ  

ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ.


ಅದನ್ನು ಮೇಲಕ್ಕೆ ಎತ್ತಿದ ತರುವಾಯ ಹೊರಜಿಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆಮೇಲೆ ಸುರ್ತಿಸ್ ಎಂಬ ಕಳ್ಳುಸುಬಿನಲ್ಲಿ ಸಿಕ್ಕಿಬಿದ್ದೇವೆಂದು ಭಯಪಟ್ಟು ಹಾಯಿಯನ್ನು ಸಡಿಲುಮಾಡಿ ನೂಕಿಸಿಕೊಂಡು ಹೋದೆವು.


ಈಗಲಾದರೋ ನೀನು ಸಮುದ್ರದಿಂದ ಹಾಳಾದಿ. ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಣುಗಿಹೋದರು.


ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ - ನೀನು ಅಹಜ್ಯನೊಡನೆ ಒಡಂಬಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳುಮಾಡುವನು ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದದ್ದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.


ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಆದರೆ ನಾವಿಕರು ಮುಂಭಾಗದಲ್ಲಿ ಲಂಗರಗಳನ್ನು ಹಾಕಬೇಕೆಂಬುವ ನೆವದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವದಕ್ಕೆ ಪ್ರಯತ್ನಿಸುತ್ತಿರುವಾಗ


ಅವರು ಲಂಗರಗಳನ್ನು ಸರಿದು ಸಮುದ್ರದಲ್ಲೇ ಬಿಟ್ಟು ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.


ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬದಾಗಿ ಆಲೋಚನೆ ಹೇಳಿದರು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು