Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:15 - ಕನ್ನಡ ಸತ್ಯವೇದವು J.V. (BSI)

15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಮಿ ಹಿತ್ತೆ ಹಾತ್ ಮನ್ತಲೆ ರೊಮಾತ್ಲ್ಯಾ ದೆವಾಚ್ಯಾ ಲೊಕಾಕ್ನಿ ಗೊತ್ತ್ ಹೊಲೆ , ತೆನಿ ಅಮ್ಕಾ ಭೆಟುಕ್ ಮನುನ್ ಅಪ್ಪಿಯ್ ಬಾಜಾರಾಕ್ನಾ , ಅನಿ ತ್ರಿಛತ್ರ್ ಮನ್ತಲ್ಯಾ ಜಾಗ್ಯಾಕ್ ಯೆಲ್ಯಾನಿ ಹ್ಯಾ ದೆವಾಚ್ಯಾ ಲೊಕಾಕ್ನಿ ಬಗ್ತಾನಾ ಪಾವ್ಲುಕ್ ಧೈರ್ಯ್ ಹೊಲೊ ಅನಿ ತೆನಿ ದೆವಾಕ್ ಧನ್ಯಾವಾದ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:15
22 ತಿಳಿವುಗಳ ಹೋಲಿಕೆ  

ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂಬ ಅಭಿಪ್ರಾಯ ಉಂಟು. ತರುವಾಯ ನಿಮ್ಮ ಸಹವಾಸದಲ್ಲಿ ನನಗೆ ಸ್ವಲ್ಪಮಟ್ಟಿಗೆ ಸಂತೃಪ್ತಿಯಾದ ಮೇಲೆ ನೀವು ಆ ದೇಶಕ್ಕೆ ನನ್ನ ಪ್ರಯಾಣವನ್ನು ಸಾಗಿಸುವಿರೆಂದು ನಂಬುತ್ತೇನೆ.


ನನ್ನ ಶರೀರದಲ್ಲಿ ನಿಮ್ಮ ಬೇಸರಿಕೆಗೆ ಆಸ್ಪದವಾದದ್ದನ್ನು ನೀವು ಹೀನೈಸಲಿಲ್ಲ, ಓಕರಿಸಲಿಲ್ಲ; ನನ್ನನ್ನು ದೇವದೂತನಂತೆ ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿರಿ.


ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ


ಅವನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.


ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ಯೆಹೋವನು ಅವನ ಮೇಲೆ ಕೋಪಗೊಂಡು - ನಿನ್ನ ಅಣ್ಣನಾಗಿರುವ ಲೇವಿಯನಾದ ಆರೋನನಿದ್ದಾನಲ್ಲಾ, ಅವನು ಚೆನ್ನಾಗಿ ಮಾತಾಡಬಲ್ಲವನೆಂದು ನನಗೆ ಗೊತ್ತದೆ; ಅವನೇ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ; ನಿನ್ನನ್ನು ಕಂಡು ಸಂತೋಷಿಸುವನು.


ಸಹೋದರರೇ, ಇದನ್ನು ಕೇಳಿ ನಮ್ಮ ಎಲ್ಲಾ ಕೊರತೆಯಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.


ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.


ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.


ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು