Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:19 - ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಯೆಹೂದ್ಯರು ಅಡ್ಡಮಾತಾಡಿದ್ದರಿಂದ ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂತು. ನನ್ನ ಸ್ವದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶೀಯರ ಮೇಲೆ ದೋಷಾರೋಪಣೆ ಮಾಡಬೇಕೆಂದು ನಾನು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಥೈತ್ಲ್ಯಾ ಜುದೆವಾನಿ ತೆಕಾ ವಿರೊಧ್ ಕರ್‍ಲ್ಯಾನಿ, ತನ್ನಾ ಮಾಕಾ ರೊಮಾತ್ಲ್ಯಾ ಸಿಸರಾಚ್ಯಾ ಫಿಡ್ಯಾತ್ ಇಚಾರ್ನಿ ಹೊಂವ್ದಿ ಮನುನ್ ಒತ್ತಾಯ್ ಕರ್‍ತಲೆ ಹೊಲೆ, ಖರೆ ಮಾಜ್ಯಾ ಲೊಕಾನಿ ಕರಲೆ ಚುಕೆಚೆ ಕಾಮ್ ಮನುನ್ ಮಿಯಾ ತುಮ್ಕಾ ಸಾಂಗಿನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:19
7 ತಿಳಿವುಗಳ ಹೋಲಿಕೆ  

ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.


ಪೌಲನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುವ ಪರ್ಯಂತರ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.


ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು