Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:2 - ಕನ್ನಡ ಸತ್ಯವೇದವು J.V. (BSI)

2 ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ಮಾಡಿದ ಉಪಕಾರವು ಅಷ್ಟಿಷ್ಟಲ್ಲ. ಮಳೆಯು ಆಗಲೇ ಹೊಯ್ಯುತ್ತಿದ್ದರಿಂದಲೂ ಚಳಿಯಾಗಿರುವದರಿಂದಲೂ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಪಾವ್ಸ್ ಪಡಿತ್ ಹೊತ್ತೊ, ಅನಿ ಲೈ ಥಂಡ್ ಕರಿ ಖರೆ ಥೈತ್ಲ್ಯಾ ಲೊಕಾನಿ ಅಮ್ಕಾ ವಿಶೆಸ್ ಕಾಳ್ಜಿ ದಾಕ್ವುನ್ ಅಮ್ಚ್ಯಾ ಸಾಟ್ನಿ ಧುಮಿ ಪೆಟ್ವುನ್ ಅಮ್ಕಾ ಸಗ್ಳ್ಯಾಕ್ನಿ ಬಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:2
19 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಗ್ರೀಕರಿಗೂ ಇತರ ಜನಗಳಿಗೂ ಜ್ಞಾನಿಗಳಿಗೂ ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲೆ ಅದೆ.


ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.


ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು; ಮಾತಾಡುವವನು ನನಗೆ ಅನ್ಯದೇಶದವನಂತಿರುವನು.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?


ಆಗ ಚಳಿಯಾಗಿದ್ದದರಿಂದ ಆಳುಗಳೂ ಓಲೇಕಾರರೂ ಇದ್ದಲಿನ ಬೆಂಕಿಮಾಡಿ ಚಳಿಕಾಯಿಸಿಕೊಳ್ಳುತ್ತಾ ನಿಂತಿರಲಾಗಿ ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.


ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು.


ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಲು ಆ ಕಾವಿನ ದೆಸೆಯಿಂದ ಒಂದು ಹಾವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಹಿಡುಕೊಂಡಿತು.


ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.


ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು