Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:8 - ಕನ್ನಡ ಸತ್ಯವೇದವು J.V. (BSI)

8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಪೀಡಿತನಾಗಿ ಮಲಗಿದ್ದನು. ಪೌಲನು ಅವನ ಬಳಿಗೆ ಹೋಗಿ ದೇವರ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಬೇಧಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ, ಪ್ರಾರ್ಥನೆ ಮಾಡಿ, ತನ್ನ ಕರಗಳನ್ನು ಅವನ ಮೇಲಿಟ್ಟು, ಅವನನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪೊಪ್ಲಿಯಾಚ್ಯಾ ಬಾಬಾಕ್ ಲೈ ಆರಾಮ್ ನತ್ತೆ , ತೆಕಾ ತಾಪ್ ಯೆಲ್ಲೊ ಅನಿ ರಗಾತ್ ಮೈದಾನ್ ಲಾಗಲಿ, ಪಾವ್ಲುನ್ ತೆಚ್ಯಾ ಜಗ್ಗೊಳ್ ಜಾವ್ನ್ ತೆಚ್ಯಾ ಸಾಟ್ನಿ ಮಾಗ್ನಿ ಕರುನ್ ತೆಜ್ಯಾರ್ ಹಾತ್ ಥವ್ನ್ ತೆಕಾ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:8
22 ತಿಳಿವುಗಳ ಹೋಲಿಕೆ  

ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.


ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.


ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.


ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಒಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.


ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.


ಹೊತ್ತು ಮುಣುಗುವಾಗ ಆದದ್ದೇನಂದರೆ ಯಾರಾರ ಮನೆಯಲ್ಲಿ ತರತರದ ರೋಗಗಳಿಂದ ಅಸ್ವಸ್ಥವಾದವರಿದ್ದರೋ ಅವರೆಲ್ಲರು ಆ ರೋಗಿಗಳನ್ನು ಆತನ ಹತ್ತಿರಕ್ಕೆ ಕರಕೊಂಡು ಬಂದರು; ಆತನು ಪ್ರತಿಯೊಬ್ಬನ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.


ಆಗ ಕೆಲವರು ತೊದಲು ಮಾತಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರತಂದು - ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.


ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.


ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.


ಆ ಸ್ಥಳದ ಸಮೀಪದಲ್ಲಿ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನೆಂಬವನಿಗೆ ಕೆಲವು ಭೂವಿು ಇತ್ತು. ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿದನು.


ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು