Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:1 - ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ದಿವಸ ಪೇತ್ರ ಯೋಹಾನರು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯ ತಕ್ಕ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋಗುತ್ತಿರಲು ಹುಟ್ಟುಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಯಾರೋ ಹೊತ್ತುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸಿ ಪೆದ್ರು ಅನಿ ಜುವಾಂವ್ ದೊಪಾರಿ ತಿನ್ ಗಂಟ್ಯಾಕ್ಡೆ ಚಲ್ತಲ್ಯಾ ತೊ ಮಾಗ್ನಿಚೊ ಎಳ್ ದೆವಾಚ್ಯಾ ಗುಡಿಕ್ಡೆ ಜಾಯ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:1
27 ತಿಳಿವುಗಳ ಹೋಲಿಕೆ  

ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ


ಮಧ್ಯಾಹ್ನದ ಮೇಲೆ ಸುಮಾರು ಮೂರು ಗಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು - ಕೊರ್ನೇಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನರ ಗುಂಪೆಲ್ಲಾ ಹೊರಗೆ ನಿಂತು ದೇವರನ್ನು ಪ್ರಾರ್ಥಿಸುತ್ತಿರಲಾಗಿ


ಹೀಗಿರಲಾಗಿ ಯಾರೋ ಒಬ್ಬನು ಬಂದು - ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು ಅವರಿಗೆ ತಿಳಿಸಿದನು.


ಯೆರೂಸಲೇವಿುಗೆ ಹಿಂತಿರುಗಿ ಹೋಗಿ ಯಾವಾಗಲೂ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.


ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇವಿುನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ - ಅವರು ಸ್ವಾವಿುಯವರು ಎಂದು ಹೇಳಿದನು. ಸ್ವಾವಿುಯವರೆಂದು ಸೀಮೋನ ಪೇತ್ರನು ಕೇಳಿ ಮೈ ಮೇಲೆ ಬಟ್ಟೆಯಿಲ್ಲದವನಾಗಿದ್ದರಿಂದ ಒಲ್ಲಿಯನ್ನು ಸುತ್ತಿಕೊಂಡು ಸಮುದ್ರದಲ್ಲಿ ದುಮುಕಿದನು.


ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.


ಪೇತ್ರನನ್ನೂ ಜೆಬೆದಾಯನ ಇಬ್ಬರು ಮಕ್ಕಳನ್ನೂ ಕರಕೊಂಡು ಹೋಗಿ ದುಃಖಪಟ್ಟು ಮನಗುಂದಿದವನಾದನು.


ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.


ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು -


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ಅವುಗಳಲ್ಲಿ ಒಂದನ್ನು ಪ್ರಾತಃಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನೀವು ದಿನಂಪ್ರತಿಯೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಹೊತ್ತಾರೆಯಲ್ಲಿ ಒಂದು ಕುರಿಯನ್ನೂ ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಅಂತು ಎರಡು ಪೂರ್ಣಾಂಗವಾದ ವರುಷದ ಕುರಿಗಳನ್ನು ಸಮರ್ಪಿಸಬೇಕು.


ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಅದೇನಂದರೆ - ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು.


ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಯೋಹಾನರನ್ನು ಕಂಡು ಭಿಕ್ಷಾಕೊಡಬೇಕು ಎಂದು ಕೇಳಲು


ಪೇತ್ರ ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು - ನಮ್ಮನ್ನು ನೋಡು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು