Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:10 - ಕನ್ನಡ ಸತ್ಯವೇದವು J.V. (BSI)

10 ಇವನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಕೂತು ಭಿಕ್ಷಾಬೇಡುತ್ತಿದ್ದವನೆಂದು ಗುರುತುಹಿಡಿದು ಅವನಿಗೆ ಸಂಭವಿಸಿದ್ದಕ್ಕೆ ವಿಸ್ಮಯಹಿಡಿದವರಾಗಿ ಬಹಳ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತ್ಯಾ “ಸುಂದರ್ ದಡ್ಪ್ಯಾತ್” ಭಿಕ್ ಮಾಗಿತ್ ಹೊತ್ತೊ ಹ್ಯೊಚ್ ತೊ ಮನುನ್ ವಳಕ್ಲ್ಯಾನಿ, ಅನಿ ತೆಂಕಾ ಹೆ ಕಶೆ ಹೊಲೆ ಮನುನ್ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:10
12 ತಿಳಿವುಗಳ ಹೋಲಿಕೆ  

ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.


ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.


ತಂದೆಯು ಮಗನ ಮೇಲೆ ಮಮತೆಯಿಟ್ಟು ತಾನು ಮಾಡುವವುಗಳನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ದೊಡ್ಡ ಕೆಲಸಗಳನ್ನು ಅವನಿಗೆ ತೋರಿಸುವನು; ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವದು.


ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.


ಎಲ್ಲರೂ ಬೆರಗಾಗಿ ಕಳವಳಗೊಂಡು - ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.


ಎಲ್ಲರು ಆಶ್ಚರ್ಯದಿಂದ ಬೆರಗಾಗಿ - ಇಗೋ, ಮಾತಾಡುತ್ತಿರುವ ಇವರೆಲ್ಲರು ಗಲಿಲಾಯದವರಲ್ಲವೇ.


ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಆ ಸ್ಥಳದವರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ಆತನ ಬಳಿಗೆ ಕರತರಿಸಿ


ಆಗ ನೆರೆಹೊರೆಯವರೂ ಅವನು ಭಿಕ್ಷಗಾರನಾಗಿದ್ದದ್ದನ್ನು ಮೊದಲು ನೋಡಿದವರೂ - ಇವನು ಕೂತಿದ್ದ ಆ ಭಿಕ್ಷುಕನಲ್ಲವೇ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು