Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:16 - ಕನ್ನಡ ಸತ್ಯವೇದವು J.V. (BSI)

16 ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾ ಇದ್ರಾಕ್ ಹೊತ್ತ್ಯಾ ಹ್ಯಾ ಮಾನ್ಸಾಚಿ ವಳಕ್ ತುಮ್ಕಾ ಸಗ್ಳ್ಯಾಕ್ನಿ ಹಾಯ್, ತೆಚ್ಯಾ ನಾವಾವರ್ತಿ ಥವಲ್ಯಾ ವಿಶ್ವಾಸಾ ವೈನಾ ಹೊ ಮಾನುಸ್ ಗುನ್ ಹೊಲಾ. ಹೆ ಸಗ್ಳೆ ತುಮಿ ಬಗುಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:16
21 ತಿಳಿವುಗಳ ಹೋಲಿಕೆ  

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ


ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಇವರು ಪೇತ್ರ ಯೋಹಾನರನ್ನು ನಡುವೆ ನಿಲ್ಲಿಸಿ - ನೀವು ಎಂಥಾ ಶಕ್ತಿಯಿಂದ ಇಲ್ಲವೆ ಎಂಥಾ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಲು


ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್‍ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್‍ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು