Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:19 - ಕನ್ನಡ ಸತ್ಯವೇದವು J.V. (BSI)

19 ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಹೊವ್ನ್ ತುಮಿ ಪಾಪಾಕ್ನಾ ಮನ್ ಪರ್ತುನ್ ಘೆವ್ನ್ ದೆವಾಚ್ಯಾ ಜಗ್ಗೊಳ್ ಯೆವಾ, ತನ್ನಾ ತೊ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:19
73 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ನಮ್ಮ ನಡತೆಯನ್ನು ಶೋಧಿಸಿ ಪರೀಕ್ಷಿಸಿ ಯೆಹೋವನ ಕಡೆಗೆ ತಿರುಗಿಕೊಳ್ಳೋಣ.


ಕರ್ತನ ಹಸ್ತವು ಅವರಿಗೆ ಸಹಾಯವಾದ್ದರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಯಾಕಂದರೆ ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದೇ.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಇಸ್ರಾಯೇಲ್ಯರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಆತನ ಮುಂದೆ ಹೋಗಿ ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.


ಕೂಡಿ ಬಂದವರು ಆತನನ್ನು - ಸ್ವಾಮೀ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ತಿರಿಗಿ ಸ್ಥಾಪಿಸಿಕೊಡುವಿಯೋ ಎಂದು ಕೇಳಲು


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ?


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಆದರೆ ಅವನು - ನಾನು ಅವನನ್ನು ಅರಿಯೆನಮ್ಮಾ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು