ಅಪೊಸ್ತಲರ ಕೃತ್ಯಗಳು 3:26 - ಕನ್ನಡ ಸತ್ಯವೇದವು J.V. (BSI)26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ದೆವಾನ್ ಮುಖ್ಯ್ ಸೆವಕ್ ಅದ್ದಿಚ್ಯಾ ಅದ್ದಿ ಮರ್ನಾಕ್ನಾ ಉಟ್ವುನ್ ತುಮ್ಕಾ ಆಶಿರ್ವಾದ್ ದಿವ್ಕ್ ಸಾಟ್ನಿ, ತುಮ್ಚ್ಯಾಕ್ಡೆ ಧಾಡುನ್ ದಿಲ್ಯಾನ್, ತೊ ತುಮ್ಚ್ಯಾ ಬುರ್ಶಾ ಕಾಮಾತ್ನಾ ದುರ್ ಕರುನ್ ತುಮ್ಕಾ ಆಶಿರ್ವಾದ್ ದಿತಾ. ಅಧ್ಯಾಯವನ್ನು ನೋಡಿ |