Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:6 - ಕನ್ನಡ ಸತ್ಯವೇದವು J.V. (BSI)

6 ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಪೆದ್ರುನ್ ತೆಕಾ ಮಾಜ್ಯಾಕ್ಡೆ ಪೈಸೆ, ಸೊನೆ ಕಾಯ್ ನಾ, ಜಾಲ್ಯಾರ್ ಮಾಜ್ಯಾಕ್ಡೆ ಹೊತ್ತೆ ಮಿಯಾ ತುಕಾ ದಿತಾ ನಜರೆತಾಚ್ಯಾ ಜೆಜುಚ್ಯಾ ನಾಂವಾನ್ ಮಿಯಾ ಸಾಂಗ್ತಾ ಚಲುಕ್‍ಲಾಗ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:6
22 ತಿಳಿವುಗಳ ಹೋಲಿಕೆ  

ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಇವರು ಪೇತ್ರ ಯೋಹಾನರನ್ನು ನಡುವೆ ನಿಲ್ಲಿಸಿ - ನೀವು ಎಂಥಾ ಶಕ್ತಿಯಿಂದ ಇಲ್ಲವೆ ಎಂಥಾ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಲು


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ


ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಈಕೆಯು ತನ್ನ ಕೈಲಾಗುವಷ್ಟು ಮಾಡಿದ್ದಾಳೆ; ಈಕೆಯು ಮುಂದಾಗಿ ನನ್ನ ಉತ್ತರಕ್ರಿಯೆಗೋಸ್ಕರ ನನ್ನ ದೇಹಕ್ಕೆ ಈ ತೈಲವನ್ನು ಹಚ್ಚಿದ್ದಾಳೆ.


ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ


ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ ಅವರನ್ನು ಲಕ್ಷ್ಯವಿಟ್ಟು ನೋಡಿದನು.


ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು