Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:1 - ಕನ್ನಡ ಸತ್ಯವೇದವು J.V. (BSI)

1 ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೆದ್ರು ಅನಿ ಜುವಾಂವ್ ಲೊಕಾಂಚ್ಯಾಕ್ಡೆ ಬೊಲಿತ್ ರಾತಾನಾ ಅನಿ ಥೊಡಿ ಲೊಕಾ ತೆಚ್ಯಾ ಜಗ್ಗೊಳ್ ಯೆಲ್ಯಾನಿ ತ್ಯಾತುರ್ ಥೊಡಿಲೊಕಾ ಯಾಜಕಾ, ಅನಿ ಉಲ್ಲಿ ಲೊಕಾ ಸಾದುಸೆವಾಂಚಿ, ಅನಿ ದೆವಾಚಿ ಗುಡಿ ರಾಕ್ತಲ್ಯಾಂಚೊ ಮುಂಖಡ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:1
20 ತಿಳಿವುಗಳ ಹೋಲಿಕೆ  

ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.


ಜನರನ್ನೂ ಹಿರಿಯರನ್ನೂ ಶಾಸ್ತ್ರಿಗಳನ್ನೂ ರೇಗಿಸಿದರು; ಮತ್ತು ಬಂದು ಅವನನ್ನು ಹಿಡಿದು ಹಿರೀಸಭೆಗೆ ತೆಗೆದುಕೊಂಡು ಹೋಗಿ


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ದೇವಾಲಯದ ಅಧಿಪತಿಯೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನಾದೀತೋ ಎಂದು ಕಳವಳಪಟ್ಟರು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಅನ್ನನೆಂಬ ಮಹಾಯಾಜಕನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಗಳೆಲ್ಲರೂ ಇದ್ದರು.


ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.


ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ -


ಅತ್ತಲಾಗಿ ಮಹಾಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟು ಕೊಡಬೇಕೆಂದು ಬೇಡಿಕೊಳ್ಳುವ ಹಾಗೂ ಯೇಸುವನ್ನು ನಾಶಗೊಳಿಸುವ ಹಾಗೂ ಜನರನ್ನು ಒಡಂಬಡಿಸಿದರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು


ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು