ಅಪೊಸ್ತಲರ ಕೃತ್ಯಗಳು 4:13 - ಕನ್ನಡ ಸತ್ಯವೇದವು J.V. (BSI)13 ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಪೆದ್ರುಕ್ ಅನಿ ಜುವಾಂವಾಕ್ ಕಸ್ಲಿಬಿ ಶಿಕಾಪಾ ಗೊತ್ತ್ ನತ್ತಿ, ಖರೆ ತೆನಿ ಉಲ್ಲೆಬಿ ಭಿಂಯೆ ನಸ್ತಾನಾ ಬೊಲುನ್ಗೆತ್ ಹೊತ್ತೆ ಬಗುನ್ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ಲೊಕಾ ಅಜಾಪ್ ಹೊಲ್ಯಾನಿ ಅನಿ ಹೆನಿ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ತೆನಿ ಯಾದ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |