Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:19 - ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತೆಂಕಾ ಪೆದ್ರುನ್ ಅನಿ ಜುವಾಂವಾಕ್, ಅಮಿ ತುಮ್ಕಾ ಮಾನುಚೆ ಕಿ? ನಾ ತರ್ ದೆವಾಕ್ ಮಾನುಚೆ? ಹ್ಯಾತುರ್ ಖಚ್ಚಿ ದೆವಾಚಿ ಇಚ್ಚಾ ತುಮಿಚ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:19
30 ತಿಳಿವುಗಳ ಹೋಲಿಕೆ  

ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು.


ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವದನ್ನು ನೀವೇ ಯೋಚಿಸಿರಿ.


ಹಾಗೆ ಮಾಡುವದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಮೆಚ್ಚಿಕೆಯಾಗಿಯೂ ಯೋಗ್ಯವಾಗಿಯೂ ಅದೆ.


ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.


ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ಯೆಹೋವನು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದುತ್ತರಕೊಟ್ಟರು.


ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.


ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ಯಥಾರ್ಥವಾಗಿ ಬಗೆಹರಿಸುವದುಂಟೋ?


ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.


ಅವನ ಊರಿನ ಹಿರಿಯರೂ ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


(ಇದು ಪಾಪಕ್ಕೆ ಕಾರಣವಾಯಿತು.) ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.


ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ.


ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.


ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು - ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.


ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ


ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ಯಾಜಕನಾದ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು