Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:2 - ಕನ್ನಡ ಸತ್ಯವೇದವು J.V. (BSI)

2 ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುಚ್ಯಾ ಬಳಾನ್ ಲೊಕಾ ಪರ್ತುನ್ ಜಿವ್ ಹೊತ್ಯಾತ್ ಮನುನ್ ತೆ ದೊನ್ ಅಪೊಸ್ತಲಾಬಿ ಶಿಕಾಪ್ ಕರಿತ್ ಹೊತ್ತೆ ಹೆ ಬಗುನ್ ತ್ಯಾಲೊಕಾನಿ ತೆಂಚ್ಯಾ ವೈರ್ ರಾಗ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:2
18 ತಿಳಿವುಗಳ ಹೋಲಿಕೆ  

ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ?


ನಾನು ಇವರ ನಡುವೆ ನಿಂತು - ಪುನರುತ್ಥಾನದ ವಿಷಯದಲ್ಲಿ ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ ಎಂದು ಕೂಗಿದ್ದನ್ನೇ ಹೊರತು ಬೇರೆ ಏನೂ ಹೇಳಲಾರರು ಅಂದನು.


ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು