Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:20 - ಕನ್ನಡ ಸತ್ಯವೇದವು J.V. (BSI)

20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮಿ ತರ್ ಗಪ್ಪ್ ರಾನಾರ್ ನ್ಹಯ್ ಅಮಿ ಬಗಟಲ್ಲಿ ಅನಿ ಆಯ್ಕಲಿ ಸಂಗ್ತಿಯಾ ಲೊಕಾಕ್ನಿ ಸಾಂಗುಕುಚ್ ಹೊಯ್ನಾ ಮನುನ್ ಜವಾಬ್ ದಿಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:20
27 ತಿಳಿವುಗಳ ಹೋಲಿಕೆ  

ನೀನು ಕಂಡು ಕೇಳಿದ್ದರ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.


ಆಗ ಯೆಹೋವನು ನನಗೆ - ಬಾಲಕನೆನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಹೋಗೇ ಹೋಗುವಿ; ನಾನು ಆಜ್ಞಾಪಿಸುವದನ್ನೆಲ್ಲಾ ನುಡಿಯಲೇ ನುಡಿಯುವಿ.


ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಅವರನ್ನು ಆಶೀರ್ವದಿಸುವದಕ್ಕೆ ನನಗೆ ಅಪ್ಪಣೆಯಾಯಿತು; ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು.


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು