Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:24 - ಕನ್ನಡ ಸತ್ಯವೇದವು J.V. (BSI)

24 ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಆಯ್ಕಲ್ಲಿ ದೆವಾಚಿ ಲೊಕಾ ದೆವಾಕ್ ಮಾಗ್ನಿ ಕರುಸಾಟಿ ಎಕಾಕ್ಡೆ ಗೊಳಾ ಹೊಲಿ ಅನಿ ತೆನಿ ಎಕುಚ್ ಮನಾನ್, ಮೊಟ್ಯಾ ಧನಿಯಾ, ಸರ್‍ಗ್ ಅನಿ ಜಿಮಿನ್ ಸಮುಂದರ್ ಅನಿ ಜಗಾತ್ಲೆ ಹರ್ ಎಕ್‍ಬಿ ರಚಲೈ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:24
20 ತಿಳಿವುಗಳ ಹೋಲಿಕೆ  

ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ ಅದರ ಸೈನ್ಯವನ್ನೂ ಭೂವಿುಯನ್ನೂ ಅದರ ಮೇಲಿರುವದನ್ನೂ ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟು ಮಾಡಿ ಸಮಸ್ತ ಪ್ರಾಣಿಗಳ ಜೀವಾಧಾರನಾಗಿರುತ್ತೀ.


ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.


ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು