Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:25 - ಕನ್ನಡ ಸತ್ಯವೇದವು J.V. (BSI)

25 ನೀನು ಪವಿತ್ರಾತ್ಮ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ - ಅನ್ಯಜನಗಳು ಯಾಕೆ ರೇಗಿದರು? ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯಾಕೆ ಯೋಚಿಸಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25-26 ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಈ ಮಾತುಗಳನ್ನು ಬರೆದನು: ‘ಜನಾಂಗಗಳು ಕೂಗಾಡುವುದೇಕೆ? ಈ ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅಮ್ಚೊ ಪುರ್ವಜ್ ಮಾನುಸ್, ದಾವಿದ್ ತುಜೊ ಸೆವಕ್ ಹೊಲ್ಲೊ ತೆನಿ ಪವಿತ್ರ್ ಆತ್ಮ್ಯಾಚಿ ಮಜ್ಜತ್ ಘೆವ್ನ್ ಹೆ ಗೊಸ್ಟಿಯಾ ಲಿವ್ಲ್ಯಾನ್: ಲೊಕಾ ಸಗ್ಳಿ ಕಶ್ಯಾಕ್ ರಾಗ್ ಹೊತ್ಯಾತ್? ಅನಿ ಫಾಯ್ದ್ಯಾಕ್ ಪಡಿನಸಲಿ ಯವ್ಜನ್ ಕಶ್ಯಾಕ್ ಕರ್ತಾತ್ ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:25
5 ತಿಳಿವುಗಳ ಹೋಲಿಕೆ  

ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.


ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಕರ್ತನಾದ ಯೆಹೋವನು ಹೇಳುವದೇನಂದರೆ - ಇದು ನೆರವೇರದು, ಆಗುವದೇ ಇಲ್ಲ.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು