ಅಪೊಸ್ತಲರ ಕೃತ್ಯಗಳು 4:26 - ಕನ್ನಡ ಸತ್ಯವೇದವು J.V. (BSI)26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಹ್ಯಾ ಜಗಾತ್ಲೆ ರಾಜಾ ಸಗ್ಳ್ಯೆ ಝಗ್ಡೊ ಕರುಕ್ ತಯಾರ್ ಹೊವ್ನ್ ಹಾತ್; ಧನಿಯಾಕ್ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಮುಂಖಡಾ ಸಗ್ಳ್ಯಿ ಗೊಳಾ ಹೊವ್ನ್ ಯೆಲಾತ್ ಮನುನ್ ಸಾಂಗುಕ್ ಲಾವ್ಲೈ ನ್ಹಯ್ ? ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.