Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:36 - ಕನ್ನಡ ಸತ್ಯವೇದವು J.V. (BSI)

36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತ್ಯಾ ಲೊಕಾತ್ನಿ ಜುಜೆ ಮನ್ತಲೊ ಹೊತ್ತೊ ತೊ ಸೈಪುನ್ ಮನ್ತಲೊ ಗಾಂವಾತ್ ಜಲಮ್ಮಲ್ಲೊ ಎಕ್ ಲೆವಿ ಹೊವ್ನ್ ಹೊತ್ತೊ ತೆಕಾ ಅಪೊಸ್ತಲಾ ಬಾನಾರ್ಬಾ ಮನುನ್ ಬಲ್ಯಿತ್. ಬರ್ನಾಬಾ ಮಟ್ಲ್ಯಾರ್ ಉಮ್ಮೆದ್ ದಿತಲೊ ಮಾನುಸ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:36
24 ತಿಳಿವುಗಳ ಹೋಲಿಕೆ  

ಇದಲ್ಲದೆ ವಿುಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟ ಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇವಿುಗೆ ಹೋದೆನು.


ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.


ಅಥವಾ, ಕೈಕೆಲಸವನ್ನು ಮಾಡದೆ ಜೀವಿಸುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಹಕ್ಕಿಲ್ಲವೇನು?


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ


ಬಾರ್ನಬ ಸೌಲರು ಮಾಡಬೇಕಾದ ಧರ್ಮಕಾರ್ಯವನ್ನು ತೀರಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರಕೊಂಡು ಯೆರೂಸಲೇವಿುನಿಂದ ಹಿಂತಿರಿಗಿ ಬಂದರು.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಗುಂಪುಕೂಡಿದ್ದವರೆಲ್ಲರು ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.


ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ಅಲ್ಲಿಂದ ಹೊರಟು ಎದುರು ಗಾಳಿ ಬೀಸುತ್ತಿದ್ದದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ


ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.


ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನಿಗೆ ದಾಯಾದನಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನನ್ನು ಕುರಿತು ಅಪ್ಪಣೆಗಳನ್ನು ಹೊಂದಿದಿರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು