Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:7 - ಕನ್ನಡ ಸತ್ಯವೇದವು J.V. (BSI)

7 ಇವರು ಪೇತ್ರ ಯೋಹಾನರನ್ನು ನಡುವೆ ನಿಲ್ಲಿಸಿ - ನೀವು ಎಂಥಾ ಶಕ್ತಿಯಿಂದ ಇಲ್ಲವೆ ಎಂಥಾ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಪೆದ್ರುಕ್ ಅನಿ ಜುವಾಂವಾಕ್ ಥೈ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ನೆವ್ನ್ ಇಬೆಕರ್ಲ್ಯಾನಿ ಅನಿ ಜುದೆವಾಂಚ್ಯಾ ಮುಖಂಡಾನಿ ತೆಂಕಾ ತುಮಿ ಹ್ಯಾ ಸೊಟ್ಟ್ಯಾಕ್ ಕಶೆ ಸಮಾ ಕರ್ಲ್ಯಾಸಿ ? ಖಚ್ಚ್ಯಾ ಬಳಾನ್ ತುಮಿ ಹೆ ಕರ್ಲ್ಯಾಸಿ? ಕೊನಾಚೆ ನಾವ್ ತುಮಿ ವಾಪರ್ಲ್ಯಾಸಿ? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:7
12 ತಿಳಿವುಗಳ ಹೋಲಿಕೆ  

ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು


ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು.


ಯೆಹೂದ್ಯರು ಆತನನ್ನು - ನಿನಗೆ ಇದನ್ನೆಲ್ಲಾ ಮಾಡುವ ಅಧಿಕಾರ ಉಂಟೆಂಬದಕ್ಕೆ ಏನು ಸೂಚಕ ಕಾರ್ಯವನ್ನು ತೋರಿಸುತ್ತೀ? ಎಂದು ಕೇಳಿದ್ದಕ್ಕೆ


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.


ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.


ಆತನು ಕೂತುಕೊಂಡು ಅವರಿಗೆ ಉಪದೇಶಮಾಡುತ್ತಿರುವಲ್ಲಿ ಶಾಸ್ತ್ರಿಗಳೂ ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ -


ಅನ್ನನೆಂಬ ಮಹಾಯಾಜಕನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಗಳೆಲ್ಲರೂ ಇದ್ದರು.


ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು